ಸಿಎಂ ಮುಂದೆಯೇ ಪಕ್ಷ ತೊರೆಯುತ್ತೇನೆ ಅಂತ ಹೇಳಿ ಬಂದ್ರು! | Oneindia Kannada

  • 7 years ago
ಯಾದಗಿರಿ ಕ್ಷೇತ್ರದ ಶಾಸಕ ಡಾ.ಎ.ಬಿ. ಮಾಲಕ ರಡ್ಡಿ ಕಾಂಗ್ರೆಸ್ ಪಕ್ಷ ತೊರೆಯುವುದು ಖಚಿತವಾಗಿದೆ. ಶಾಸಕರ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಮಾತುಕತೆಯೂ ವಿಫಲವಾಗಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಎ.ಬಿ. ಮಾಲಕ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಿದರು. ಆದರೆ, 'ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಹೋಗುವೆ' ಎಂದು ಮಾಲಕ ರಡ್ಡಿ ಸಿದ್ದರಾಮಯ್ಯ ಸಮ್ಮುಖದಲ್ಲಿಯೇ ಹೇಳಿ ಬಂದಿದ್ದಾರೆ.ಯಾದಗಿರಿ ಕ್ಷೇತ್ರದ ಶಾಸಕ ಎ.ಬಿ.ಮಾಲಕ ರಡ್ಡಿ ಮತ್ತು ಅಫಜಲಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಅಥವ ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇಬ್ಬರು ಶಾಸಕರು ಪಕ್ಷ ತೆರೆದರೆ ಕಾಂಗ್ರೆಸ್‌ಗೆ ಯಾದಗಿರಿ ಜಿಲ್ಲೆಯಲ್ಲಿ ಹಿನ್ನಡೆ ಉಂಟಾಗಲಿದೆ.'ಇಷ್ಟು ವರ್ಷ ಕಾಂಗ್ರೆಸ್ ಪಕ್ಷದಲ್ಲಿದ್ದೀರಿ. ಸಚಿವರೂ ಆಗಿದ್ದೀರಿ, ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಪಕ್ಷ ಬಿಟ್ಟು ಹೋಗುವ ನಿರ್ಧಾರ ಬೇಡ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಆದರೆ, ಎ.ಬಿ.ಮಾಲಕ ರಡ್ಡಿ ಅದನ್ನು ಒಪ್ಪಿಲ್ಲ

C.M couldn't convince him about staying in the party. madaka reddy said that he has already faced lot of insults during siddaramaiah's period and told that he will leave the party in front of CM itself.