ಹಲವು ವದಂತಿಗಳಿಗೆ ತೆರೆ ಎಳೆದ ದೇವೇಗೌಡರು | Oneindia Kannada

  • 7 years ago
ಕೋಲಾರ, ನವೆಂಬರ್ 30 : 'ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಜೆಡಿಎಸ್ ಪ್ರಯತ್ನ ನಡೆಸುತ್ತಿದೆ ಎಂಬ ಅನುಮಾನ ಹಲವರಿಗೆ ಕಾಡುತ್ತಿದೆ. ಆದರೆ, ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾತನಾಡಿದ ದೇವೇಗೌಡರು, 'ಜೆಡಿಎಸ್‌ ಕಾಂಗ್ರೆಸ್‌ನೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. 224 ಕ್ಷೇತ್ರಗಳಲ್ಲಿಯೂ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವುದಿಲ್ಲ' ಎಂದು ದೇವೇಗೌಡರು ಸ್ಪಷ್ಟಪಡಿಸಿದರು. 'ಚನ್ನಪಟ್ಟಣವನ್ನ ರಾಜಕೀಯವಾಗಿ ಮದುವೆ ಮಾಡಿಕೊಂಡಿದ್ದೇನೆ' ಶ್ರೀನಿವಾಸಪುರದಲ್ಲಿ ಪಕ್ಷದ ಕಚೇರಿ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ದೇವೇಗೌಡರು, 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗದಲ್ಲಿ 9 ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಇದೇ ಮೈತ್ರಿ ವಿಧಾನಸಭೆ ಚುನಾವಣೆಯಲ್ಲೂ ಮುಂದುವರೆಯಲಿದೆ ಎಂಬುದು ಲೆಕ್ಕಾಚಾರವಾಗಿದೆ. ಆದ್ದರಿಂದ, ಎರಡೂ ಪಕ್ಷಗಳ ಮೈತ್ರಿ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ.

JDS supremo HD Deve Gowda made it clear that, there is no alliance with the Congress in the 2018 Karnataka assembly elections.

Recommended