• 7 years ago
ಸ್ವಚ್ಛ ಉಸಿರಿಗಾಗಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದ ಮಾಜಿ ಸಚಿವ ಎಸ್.ಎ.ರಾಮದಾಸ್ ಸೇರಿದಂತೆ 20 ಕ್ಕೂ ಹೆಚ್ಚು ಹೋರಾಟಗಾರರನ್ನು ಮೈಸೂರಿನ ವಿದ್ಯಾರಣ್ಯಪುರಂನ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಜೆ.ಪಿ.ನಗರದ ಸುಯೇಜ್ ಫಾರಂ ಎದುರು ಗುರುವಾರದಿಂದ ರಾಮದಾಸ್ ನೇತೃತ್ವದಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳವರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಶುಕ್ರವಾರ ಸುಯೇಜ್ ಫಾರಂಗೆ ತೆರಳುತ್ತಿದ್ದ ಲಾರಿಗಳನ್ನು ತಡೆಯಲು ರಾಮದಾಸ್ ಹಾಗೂ ಬೆಂಬಲಿಗರು ಮುಂದಾಗಿದ್ದಾರೆ. ಸಾಮರ್ಥ್ಯ ಮೀರಿ ಕಸ ವಿಲೇವಾರಿ ಮಾಡುತ್ತಿರುವುದನ್ನು ವಿರೋಧಿಸಿ ಲಾರಿಗಳನ್ನು ತಡೆಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ರಾಮದಾಸ್ ನಡುವೆ ಕೆಲ ಸಮಯ ಮಾತಿನ ಚಕಮಕಿ ನಡೆದಿದೆ. ಅಲ್ಲದೆ, ತಳ್ಳಾಟ, ನುಕಾಟ ಕೂಡ ಆಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಪೊಲೀಸರು ರಾಮದಾಸ್ ಹಾಗೂ ವೃದ್ಧ ಮಹಿಳೆಯರು ಸೇರಿದಂತೆ 20ಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಿದ್ದಾರೆ.


mysuru vidyaranyapuram police arrests bjp leader a Ramadas who was protesting with few of his followers in Mysuru

Category

🗞
News

Recommended