• 6 years ago
ಚಿತ್ರದುರ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ನಟ ದೊಡ್ಡಣ್ಣ ಅಳಿಯ ಮತ್ತು ಉದ್ಯಮಿ ಕೆ.ಸಿ.ವೀರೇಂದ್ರ ಅವರು ಚಿತ್ರದುರ್ಗ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಕೆ.ಸಿ.ವೀರೇಂದ್ರ (ಪಪ್ಪಿ) ಅವರು ಮೂಲತಃ ಚಳ್ಳಕೆರೆಯವರು. ಆದರೆ, ಚಿತ್ರದುರ್ಗ ನಗರ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಉದ್ಯಮಿಯಾಗಿದ್ದು ಹಲವು ಸಮಾಜಮುಖಿ ಕಾರ್ಯದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಆದ್ದರಿಂದ, ಜಿಲ್ಲೆಯ ಜನಗರಿಗೆ ಅವರು ಚಿರಪರಿಚಿತರು.

2016ರ ಡಿಸೆಂಬರ್‌ನಲ್ಲಿ ಕೆ.ಸಿ.ವೀರೇಂದ್ರ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿತ್ತು. 500 ಮತ್ತು 1000 ರೂ. ನೋಟುಗಳು ನಿಷೇಧಗೊಂಡ ಬಳಿಕ ನಡೆದ ದಾಳಿಯ ವೇಳೆ ಅವರ ನಿವಾಸದಲ್ಲಿ ಲಕ್ಷಾಂತರ ರೂ. ಹೊಸ ನೋಟುಗಳು ಪತ್ತೆಯಾಗಿತ್ತು.

ಚಿತ್ರದುರ್ಗ ನಗರ ಕ್ಷೇತ್ರ ಸದ್ಯ ಬಿಜೆಪಿ ವಶದಲ್ಲಿದ್ದು ಜಿ.ಎಚ್.ತಿಪ್ಪಾರೆಡ್ಡಿ ಅವರು ಶಾಸಕರು.
K.C.Veerendra may contest for Karnataka assembly elections 2018 from Chitradurga city assembly constituency as JDS candidate. K.C.Veerendra is businessmen and son-in-law of veteran actor Doddanna. G.H.Thippareddy (BJP) sitting MLA of the constituency.

Category

🗞
News

Recommended