• 4 years ago
ದಕ್ಷಿಣ ಕೊರಿಯಾ ಮೂಲದ ಕಿಯಾ ಮೋಟಾರ್ಸ್ ದೇಶಿಯ ಮಾರುಕಟ್ಟೆಗಾಗಿ ಸೋಲ್ ಕಾಂಪ್ಯಾಕ್ಟ್-ಎಸ್‌ಯುವಿಯನ್ನು ಅಧ್ಯಯನ ನಡೆಸುತ್ತಿದೆ ಎಂದು ಹೇಳಲಾಗಿದೆ. ಈ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ ನಡೆದ
ಆಟೋ ಎಕ್ಸ್‌ಪೋ ಸಂದರ್ಭದಲ್ಲಿ ಈ ಎಸ್‌ಯುವಿಯು ಹೆಚ್ಚಿನ ಸಂಖ್ಯೆಯ ಗ್ರಾಹಕರ ಗಮನ ಸೆಳೆದ ನಂತರ ಕಿಯಾ ಮೋಟಾರ್ಸ್ ಈ ನಿರ್ಧಾರಕ್ಕೆ ಬಂದಿದೆ.

ಕಿಯಾ ಮೋಟಾರ್ಸ್, ಸೋಲ್ ಕಾಂಪ್ಯಾಕ್ಟ್-ಎಸ್‌ಯುವಿಯನ್ನು ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಹಾಗೂ ಎಲೆಕ್ಟ್ರಿಕ್ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಲಿದೆ. ಆದರೆ
ಭಾರತದಲ್ಲಿ ಪೆಟ್ರೋಲ್ ಮಾದರಿಗಳನ್ನು ಮಾತ್ರ ಬಿಡುಗಡೆಗೊಳಿಸಲಿದೆ.

Category

🗞
News

Recommended