• 4 years ago
ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಟಿ-ರಾಕ್ ಎಸ್‌ಯುವಿಯನ್ನು ಈ ವರ್ಷದ ಮಾರ್ಚ್‌ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಎಸ್‌ಯುವಿಯ ಆರಂಭಿಕ ಬೆಲೆ ಭಾರತದ ಎಕ್ಸ್‌ಶೋರೂಂ ದರದಂತೆ ರೂ.19.99 ಲಕ್ಷಗಳಾಗಿದೆ. ಮೊದಲ ಹಂತದಲ್ಲಿ ಕಂಪನಿಯು ದೇಶಿಯ ಮಾರುಕಟ್ಟೆಗಾಗಿ 1,000 ಯೂನಿಟ್‌ಗಳನ್ನು ಆಮದು ಮಾಡಿಕೊಂಡಿದೆ.

ಟಿ-ರಾಕ್ ಎಸ್‌ಯುವಿ ಭಾರತದಲ್ಲಿ ಬಿಡುಗಡೆಯಾದ ಕೇವಲ ಮೂರೇ ತಿಂಗಳಲ್ಲಿ ಎಲ್ಲಾ 1000 ಯೂನಿಟ್‌ಗಳು ಮಾರಾಟವಾಗಿವೆ. ಲಾಕ್‌ಡೌನ್ ಜಾರಿಗೊಳಿಸುವ ಮುನ್ನವೇ ಈ ಎಸ್‌ಯುವಿಯನ್ನು ಮಾರಾಟ ಮಾಡಲಾಗಿತ್ತು. ಇದರಿಂದ ಲಾಕ್‌ಡೌನ್ ಟಿ-ರಾಕ್ ಮಾರಾಟದ ಮೇಲೆ ಯಾವುದೇ ಪರಿಣಾಮವನ್ನುಂಟು ಮಾಡಿಲ್ಲ.

ಫೋಕ್ಸ್‌ವ್ಯಾಗನ್ ಕಂಪನಿಯು ಟಿ-ರಾಕ್ ಎಸ್‌ಯುವಿಯನ್ನು ಸಿಬಿಯು ರೂಪದಲ್ಲಿ ಆಮದು ಮಾಡಿಕೊಳ್ಳುತ್ತಿದ್ದು, ಹೊಸ ಆಮದು ನಿಯಮಗಳ ಲಾಭವನ್ನು ಪಡೆದುಕೊಳ್ಳುತ್ತಿದೆ. ಭಾರತದ ಆಮದು ನಿಯಮಗಳನ್ವಯ ಈಗ ಆಟೋಮೊಬೈಲ್ ಕಂಪೆನಿಗಳು ವರ್ಷಕ್ಕೆ 2,500 ವಾಹನಗಳನ್ನು ಸಿಕೆಡಿ ಮತ್ತು ಸಿಬಿಯು ರೂಪದಲ್ಲಿ ಆಮದು ಮಾಡಿಕೊಳ್ಳಬಹುದು.

Category

🗞
News

Recommended