• 4 years ago
ಕೇಂದ್ರ ಸರ್ಕಾರವು ಮೇ ತಿಂಗಳ ಮಧ್ಯ ಭಾಗದಲ್ಲಿ ದೇಶಾದ್ಯಂತ ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸಿತು. ಇದರಿಂದಾಗಿ ಸುಮಾರು ಎರಡು ತಿಂಗಳ ಬಿಡುವಿನ ನಂತರ ವಾಹನ ತಯಾರಕ ಕಂಪನಿಗಳು ಉತ್ಪಾದನೆ ಹಾಗೂ ಮಾರಾಟವನ್ನು ಪುನರಾರಂಭಿಸಿದವು.

ಮೇ ತಿಂಗಳ ಕಾರು ಮಾರಾಟದ ಬಗ್ಗೆ ಹೆಳುವುದಾದರೆ ಎಲ್ಲಾ ಕಾರು ತಯಾರಕ ಕಂಪನಿಗಳು ಮಾರಾಟದಲ್ಲಿ ಭಾರೀ ಕುಸಿತವನ್ನು ದಾಖಲಿಸಿವೆ. ಮೇ ತಿಂಗಳ ಮೊದಲ ಭಾಗದಲ್ಲಿ ಲಾಕ್‌ಡೌನ್‌ನಿಂದಾಗಿ ಎಲ್ಲಾ ರೀತಿಯ ಕಾರ್ಯಾಚರಣೆಗಳು ಸ್ಥಗಿತಗೊಂಡಿದ್ದೇ ಇದಕ್ಕೆ ಮುಖ್ಯ ಕಾರಣ.

ಕಾರ್ಯಾಚರಣೆಗಳು ಪುನರಾರಂಭವಾದ ನಂತರ ಹ್ಯುಂಡೈ ಕಂಪನಿಯ ಕ್ರೆಟಾ ಕಾರು ಮೇ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೇ ತಿಂಗಳಿನಲ್ಲಿ ಹೊಸ ಹ್ಯುಂಡೈ ಕ್ರೆಟಾ ಕಾರಿನ 3,212 ಯುನಿಟ್‌ಗಳು ಮಾರಾಟವಾಗಿವೆ.

Category

🗞
News

Recommended