• 2 months ago
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನಲ್ಲಿ ಫಿಲ್ ಸಾಲ್ಟ್ ಅಬ್ಬರ ಮುಂದುವರೆದಿದೆ. ಅದರಲ್ಲೂ ಲಂಡನ್ ಸ್ಪಿರಿಟ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಡನ್ ಸ್ಪಿರಿಟ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಫಿಲ್ ಸಾಲ್ಟ್ ಹಾಗೂ ಮ್ಯಾಥ್ಯೂ ಹರ್ಟ್ಸ್ ಇನಿಂಗ್ಸ್ ಆರಂಭಿಸಿದ್ದರು. ಆದರೆ ಕೇವಲ 2 ರನ್​ಗಳಿಸಿ ಮ್ಯಾಥ್ಯೂ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಫಿಲ್ ಸಾಲ್ಟ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಸಾಲ್ಟ್ ಆ ಬಳಿಕ ಬಿರುಸಿನ ಹೊಡೆತಕ್ಕೆ ಕೈ ಹಾಕಿದರು. ಪರಿಣಾಮ 41 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳು ಒಳಗೊಂಡಂತೆ ಸಾಲ್ಟ್ ಬ್ಯಾಟ್​ನಿಂದ 58 ರನ್​ಗಳು ಹೊರಬಂದವು.

Category

🥇
Sports

Recommended